BJP-JDS ಮೈತ್ರಿಯಿಂದಾಗಿ JDS ರಾಜ್ಯಾಧ್ಯಕ್ಷ C.M. ಇಬ್ರಾಹಿಂ ತಮ್ಮ ಅಸಮಾಧಾನ ಹೊರಹಾಕಿದ್ದರು. ಇದಕ್ಕೆ ಸಂಬಂಧಿಸಿ ಗೃಹ ಸಚಿವ ಡಾ.G. ಪರಮೇಶ್ವರ್
ಬಿಜೆಪಿ ಜತೆಗಿನ ಜೆಡಿಎಸ್ ಮೈತ್ರಿ ಬಗ್ಗೆ ನಿನ್ನೆ ಮಾತನಾಡಿದ್ದ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ವರಿಷ್ಠ ಹೆಚ್.ಡಿ.ದೇವೇಗೌಡರು ಇಬ್ರಾಹಿಂಗೆ ಫೋನಾಯಿಸಿ ಮನವೊಲಿಸಲು ಯತ್ನಿಸಿದ್ದಾರೆ. ಅಲ್ಲದೆ ಹೆಚ್.ಡಿ.ಕುಮಾರಸ್ವಾಮಿ ಅವರ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ನಡೆಯುವ ಸಭೆಗೆ ಆಗಮಿಸುವಂತೆ ಸೂಚಿಸಿದ್ದಾರೆ. ಈ ವೇಳೆ ಇಬ್ರಾಹಿಂ ನಾನು ಮುಂದಿನ ದಿನಗಳಲ್ಲಿ ಪ್ರತ್ಯೇಕವಾಗಿ ಮಾತನಾಡುತ್ತೇನೆಂದು ತಿಳಿಸಿದ್ದಾರೆ ಎನ್ನಲಾಗಿದೆ.