ಬೆಂಗಳೂರು : ರಾಜ್ಯದ ಪ್ರತಿಯೊಂದು ಗ್ರಾಮಗಳ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಪಂಚಮಿತ್ರ ಎಂಬ ಸಹಾಯವಾಣಿ ವ್ಯವಸ್ಥೆಯನ್ನು ಜಾರಿಗೆ ತರುತ್ತಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಗಾಂಧಿ ಗ್ರಾಮ ಪುರಸ್ಕಾರ ಮತ್ತು ಸ್ವಚ್ಛ ಸರ್ವೇಕ್ಷಣ ರಾಜ್ಯಮಟ್ಟದ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೈಗಾರಿಕೆ ಮಾಹಿತಿ ತಂತ್ರಜ್ಞಾನ ವಲಯದಂತೆ ಪಂಚಾಯಿತಿಗಳಲ್ಲೂ ಸುಗಮ ಆಡಳಿತಕ್ಕಾಗಿ ನೂತನ ನೀತಿ ರೂಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಮುಂದಿನ ವರ್ಷದಿಂದ ಗ್ರಾಮ ಪಂಚಾಯಿತಿ ಅಧಿಕಾರಿಗಳ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿಯನ್ನು ಪಾರದರ್ಶಕವಾಗಿ ಜಾರಿಗೊಳಿಸಲಾಗುವುದು. ಪಿಡಿಒ ಗಳನ್ನು ಹೆಚ್ಚು ಉತ್ತರದಾಯಿ ಹಾಗೂ ಹೊಣೆಗಾರರನ್ನಾಗಿಸುವ ನಿಟ್ಟಿನಲ್ಲಿ ಜಿಪಿಎಸ್ ಪೆನ್ಸಿಂಗ್ ಅಳವಡಿಸಲಾಗಿದೆ. ಈ ಮೂಲಕ ಗ್ರಾಮ ಪಂಚಾಯಿತಿ ಅಧಿಕಾರಿ ಎಲ್ಲಿ ತಿರುಗಾಡುತ್ತಿದ್ದಾರೆ. ಎಷ್ಟು ದಿನ ಕೆಲಸಕ್ಕೆ ಹಾಜರಾಗಿದ್ದಾರೆ ಎಂಬುದನ್ನು
ಇದನ್ನು ಒದಿ :-“ಜಿಯೋಟ್ಯಾಗ್ ಪ್ರಯೋಗ” ಕ್ಕೆ ಬೀದಿ ನಾಯಿಗಳನ್ನು ಬಳಸದಂತೆ ಸೂಚಿಸಿದ್ದಾರೆ. ಬೆಂಗಳೂರು ನಾಗರಿಕ ಸಂಸ್ಥೆ ಹೇಳಿದೆ
ಪತ್ತೆ ಹಚ್ಚಲು ಸಾಧ್ಯ, ಅಧಿಕಾರಿ ಕೆಲಸ ಮಾಡಿದ ದಿನಕ್ಕಷ್ಟೆ ವೇತನ ನೀಡುವ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದರು. ಗ್ರಾಮಮಟ್ಟದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಪಂಚಮಿತ್ರ ಎಂಬ ಸಹಾಯವಾಣಿಯನ್ನು ಇನ್ನೆರಡು ತಿಂಗಳಲ್ಲಿ ಆರಂಭಿಸಲಾಗುವುದು. ಇದು ರಾಜ್ಯಾದ್ಯಂತ ಎಲ್ಲಾ ಪಂಚಾಯಿತಿಗಳ ವ್ಯವಸ್ಥೆಗೂ ಅನ್ವಯವಾಗಲಿದೆ. ಪಂಚತಂತ್ರ-2 ಸಾಪ್ಟರ್ ಮೂಲಕ ಮುಂದಿನ ದಿನಗಳಲ್ಲಿ 2 ರಿಂದ 3 ಸಾವಿರ ಕೋಟಿ ತೆರಿಗೆ ಸಂಗ್ರಹಿಸಲು ಸಾಧ್ಯವಾಗಲಿದೆ. ಪಂಚಾಯಿತಿ ಸಭೆಗಳ ಮಾಹಿತಿ ಕೂಡ ಇದರಲ್ಲಿ ದಾಖಲಾಗಲಿದೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ 70 ಸಾವಿರ ಸಭೆಗಳು ನಡೆದಿವೆ. ಪಿಡಿಒ ಗಳ ಹಾಜರಾತಿ ಮೇಲೆ ಇದೇ ವ್ಯವಸ್ಥೆಯಲ್ಲಿ ನಿಗಾ ವಹಿಸಲಾಗುವುದು ಎಂದು ಹೇಳಿದರು.
ಪಂಚಾಯಿತಿ ವ್ಯವಸ್ಥೆಗಳನ್ನು ಮತ್ತಷ್ಟು ಪ್ರಜಾಪ್ರಭುತ್ವ ಹಾಗೂ ಆರ್ಥಿಕ ಸಬಲೀಕರಣ ಮಾಡಲು ನಿರಂತರವಾಗಿ ಚರ್ಚೆ ನಡೆಸಲಾಗುತ್ತಿದೆ. ಈವರೆಗೂ ನೂರಕ್ಕೂ ಹೆಚ್ಚು ಸಭೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು.