ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಅಂಗಡಿಯೊಂದು ಹೊತ್ತಿ ಉರಿದ ಪರಿಣಾಮ ಮೂವರು ಸಜೀವ ದಹನವಾಗಿದ್ದಾರೆ. ಅಂಗಡಿಯ ಅವಶೇಷಗಳಡಿ ಇನ್ನೂ ಕೆಲ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುತ್ತಿದ್ದು, ಕಾರ್ಮಿಕರಿಗಾಗಿ ಶೋಧ ಕಾರ್ಯವೂ ನಡೆಸಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.