Tue. Dec 24th, 2024

ಪೊಲೀಸ್ ಇಲಾಖೆ ಲಿಖಿತ ಪರೀಕ್ಷೆ, ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ, ಯಾದಗಿರಿಯಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ

ಪೊಲೀಸ್ ಇಲಾಖೆ ಲಿಖಿತ ಪರೀಕ್ಷೆ, ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ, ಯಾದಗಿರಿಯಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್), (ಪುರುಷ ಮತ್ತು ಮಹಿಳಾ), (ತೃತಿಯ ಲಿಂಗ ಪುರುಷ ಮತ್ತು ಮಹಿಳಾ), ಸೇವಾ ನಿರತ ಹಾಗೂ ಬ್ಯಾಕಲಾಗ್ ಒಟ್ಟು 454 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಬರುವ ನವೆಂಬರ್ 5 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 12.30 ಗಂಟೆವರೆಗೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಆರ್.ಚೇತನ್ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕ ಅಡ್ಡೂರು ಶ್ರೀನಿವಾಸಲು ಅವರು ಪ್ರತ್ಯೇಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ 4 ರಿಂದ 16ರ ವರೆಗೆ ಯಾದಗಿರಿಯಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ

ಯಾದಗಿರಿ: ಸೇನೆಗೆ ಸೇರಬಯಸುವ ಯುವಕರಿಗೆ ಗುಡ್‌ ನ್ಯೂಸ್‌ ಇದು. ಡಿ 4 ರಿಂದ 16ರವರೆಗೆ 13 ದಿನಗಳ ಕಾಲ ಕಲ್ಯಾಣ ಕರ್ನಾಟಕದ ಭಾಗದ ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ಅಗ್ನಿವೀರ್‌ ನೇಮಕಾತಿ ರ‍್ಯಾಲಿ ನಡೆಯಲಿದೆ. ರ‍್ಯಾಲಿಗೆ ಯಾದಗಿರಿ, ಕಲಬುರಗಿ, ಬೀದರ್‌, ರಾಯಚೂರು, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳ ಯುವಕರು ಭಾಗವಹಿಸಲು ಅವಕಾಶವಿದೆ.

ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಈ ನೇಮಕಾತಿ ರ‍್ಯಾಲಿ ನಡೆಯಲಿದ್ದು, ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್‌ಮನ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳಿಂದ, ಆಸೆ, ಆಮಿಷಗಳಿಗೆ ಒಳಗಾಗಬಾರದು, ಅಭ್ಯರ್ಥಿಗಳ ಅಂತಿಮ ಆಯ್ಕೆ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ, ರ‍್ಯಾಲಿ ವೇಳೆಯ ಪರೀಕ್ಷೆ ಹಾಗೂ ಅಂತಿಮ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅ 27ಕ್ಕೆ ನೇರ ಸಂದರ್ಶನ

ಕಲಬುರ್ಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅ 27 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2ವರೆಗೆ ವಾಕ್ ಇನ್ ಇಂಟರ್‌ವ್ಯೂವ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಬೆಂಗಳೂರು ಮೂಲದ ಕ್ಯಾಡ್ ಮ್ಯಾಕ್ಸ್ ಸಲ್ಯೂಷನ್ಸ್ ಎಜುಕೇಷನ್ ಟ್ರಸ್ಟ್ ಇದರಲ್ಲಿ ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ ಪಾಸ್ ಅಥವಾ ಫೇಲ್ ಆದ ಅಭ್ಯರ್ಥಿಗಳಿಗೆ ಎರಡು ವರ್ಷಗಳ ಅಪ್ರಂಟಿಫ್ ತರಬೇತಿ ಜೊತೆಗೆ ಉದ್ಯೋಗ ಅವಕಾಶ ಇರುತ್ತದೆ.

ಸೂಚನೆ

ನೇಮಕಾತಿಗೆ ಲಿಖಿತ ಪರೀಕ್ಷೆಯು ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾವೇರಿ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶದ ಬೀದರ, ಕಲಬುರಗಿ ನಗರ ಮತ್ತು ಜಿಲ್ಲೆ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಲಾಗುವುದು. ಇದಲ್ಲದೆ ಕರೆಪತ್ರದ ಲಿಂಕ್ ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆ ಪತ್ರ ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಬೇಕೆಂದು ತಿಳಿಸಿದ್ದಾರೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝರಾಕ್ಸ್, ರೆಸ್ಯೂಮ್ (ಬಯೋಡಟಾ), ಭಾವಚಿತ್ರ ಹಾಗೂ ಆಧಾರ್‌ ಕಾರ್ಡ್‌ನೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಮೊ. 99802 51521 ಸಂಪರ್ಕಿಸಬಹುದು.

Whatsapp Group Join
facebook Group Join

Related Post

Leave a Reply

Your email address will not be published. Required fields are marked *

error: Content is protected !!
Enable Notifications OK No thanks