ನ ೨೪:
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು ಈ ಬಗ್ಗೆ ಸಚಿವ ಹೆಚ್ ಕೆ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಡಿಕೆ ಶಿವಕುಮಾರ್ ಪ್ರಕರಣದ ಸಂಬಂಧ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಡ್ವೊಕೇಟ್ ಜನರರಲ್ ಆಗಿದ್ದ ಪ್ರಭುಲಿಂಗ ನಾವಡಗಿ ವರದಿ ಆಧರಿಸಿ ಹಾಲಿ ಅಡ್ವೊಕೇಟ್ ಜನರಲ್ ಅವರಿಂದ ಅಭಿಪ್ರಾಯ ಪಡೆಯಲಾಗಿತ್ತು. ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಹಾಲಿ ಎಜಿ ಜನರಲ್ ಶಶಿಕಿರಣ್ ಶೆಟ್ಟಿ ಅಭಿಪ್ರಾಯ ಪರಿಗಣಿಸಿ, ಸರ್ಕಾರ ಅನುಮತಿ ವಾಪಸ್ ಪಡೆಯಲು ನಿರ್ಧರಿಸಿದೆ.
ಕೋರ್ಟ್‌ನಲ್ಲಿ ಸಿಬಿಐ ಪ್ರಕರಣದ ವಿಚಾರಣೆ ಬಾಕಿ ಇದೆ. ಹೀಗಾಗಿ ಕೇವಲ ತನಿಖೆಗೆ ಸಿಬಿಐಗೆ ನೀಡಿರುವ ಅನುಮತಿ ಮಾತ್ರ ಹಿಂಪಡೆಯುವುದಕ್ಕೆ ಸರ್ಕಾರಕ್ಕೆ ಸಾಧ್ಯತೆ ಇದೆ.