ಡಿ ೦೧: ಭ್ರೂಣ ಹತ್ಯೆ ಜಾಲವನ್ನು ಬುಡ ಸಮೇತ ಕಿತ್ತು ಹಾಕಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಜೊತೆ ಚರ್ಚೆ ನಡೆಸಿ ಭ್ರೂಣ ಹತ್ಯೆ ಪ್ರಕರಣವನ್ನು ‘ಸಿಐಡಿ’ ತನಿಖೆಗೆ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಸಚಿವರು, ಪೊಲೀಸ್ ಇಲಾಖೆ ಹಾಗೂ ಸಿಐಡಿ ತಂಡಕ್ಕೆ ಆರೋಗ್ಯ ಇಲಾಖೆ ತನಿಖೆಯಲ್ಲಿ ಸಂಪೂರ್ಣ ಸಹಕಾರ ನೀಡಲಿದೆ. ಈ ಜಾಲದಲ್ಲಿ ಯಾರೇ ಅಧಿಕಾರಿಗಳು ಎಷ್ಟೇ ದೊಡ್ಡವರು ಭಾಗಿಯಾಗಿದ್ದರೂ, ಮೂಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗಾಗಿದ್ದು, ಸಾರ್ವಜನಿಕರು ಕೂಡ ಭ್ರೂಣ ಹತ್ಯೆಯನ್ನ ಮಟ್ಟ ಹಾಕಲು ನಮ್ಮಂದಿಗೆ ಕೈ ಜೋಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಭ್ರೂಣ ಹತ್ಯೆ ಜಾಲವನ್ನ ಬುಡ ಸಮೇತ ಕಿತ್ತು ಹಾಕಬೇಕು. ಈ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ @CMofKarnataka ಹಾಗೂ ಗೃಹ ಸಚಿವ @DrParameshwara ಜೊತೆ ಚರ್ಚೆ ನಡೆಸಿ ಪ್ರಕರಣವನ್ನು ‘ಸಿಐಡಿ’ ತನಿಖೆಗೆ ವಹಿಸಲಾಗಿದೆ.
ಪೊಲೀಸ್ ಇಲಾಖೆ ಹಾಗೂ ಸಿಐಡಿ ತಂಡಕ್ಕೆ ಆರೋಗ್ಯ ಇಲಾಖೆಯು ತನಿಖೆಯಲ್ಲಿ ಸಂಪೂರ್ಣ ಸಹಕಾರ ನೀಡಲಿದೆ.
ಈ ಜಾಲದಲ್ಲಿ… pic.twitter.com/lqPXjSKDoL
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) November 30, 2023
ಮಂಡ್ಯದಲ್ಲಿ ಭ್ರೂಣ ಹತ್ಯೆ ಪತ್ತೆ ದಂಧೆಯಲ್ಲಿ ಕೆಲ ಆರೋಗ್ಯ ಇಲಾಖೆಯ ಅಧಿಕಾರಿಗಳ ಕೈವಾಡ ಇರುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಮೈಸೂರು ತಾಲೂಕು ವೈದ್ಯಾಧಿಕಾರಿ ರಾಜೇಶ್ವರಿ ಅವರ ಕರ್ತವ್ಯ ಲೋಪ ಎದ್ದು ಕಾಣುತ್ತಿದ್ದು, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡುವಂತೆ ಆಯುಕ್ತರಿಗೆ ಆದೇಶ ನೀಡಿದ್ದೇನೆ. ಅಲ್ಲದೇ ಈ ಹಿಂದೆ ಮೈಸೂರು ಡಿಎಚ್ ಒ ಆಗಿ ಕಾರ್ಯನಿರ್ವಹಿಸಿದ್ದ ಡಾ.ರವಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
The preliminary investigation into the illegal fetal detection racket in Mandya has revealed the involvement of some Health Department officials.
Mysore Taluk Medical Officer Rajeshwari’s dereliction of duty is evident. I have ordered the commissioner to suspend Rajeshwari with… pic.twitter.com/ufcFoUowDn
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) November 30, 2023