ಈ ಸಂಬಂಧ ಮುಕ್ತ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರು “ನಾವು ಎಲ್ಲಾ ಲೈವ್ ಸ್ಟ್ರೀಮಿಂಗ್‌ಗಳನ್ನು ನಿರ್ಬಂಧಿಸುತ್ತಿದ್ದೇವೆಂದು ಹೇಳಿದ್ದಾರೆ.
ವಿಡಿಯೊ ಕಾನ್ಫರೆನ್ಸ್‌ಗೂ ಅವಕಾಶ ಇರುವುದಿಲ್ಲ. ತಂತ್ರಜ್ಞಾನ ದುರ್ಬಳಕೆ, ಕೆಲವರಿಂದ ಅನುಚಿತ ವರ್ತನೆ ನಡೆದಿರುವುದು ದುರದೃಷ್ಟಕರ ಸಂಗತಿ. ಇದು ಅನಿರ್ಬಂಧಿತ ಪರಿಸ್ಥಿತಿಯಾಗಿದೆ. ಇದೆಲ್ಲದರ ನಡುವೆ ಕರ್ನಾಟಕ ಹೈಕೋರ್ಟ್ ಸಾರ್ವಜನಿಕರ ಹಿತದೃಷ್ಟಿಯಿಂದ ವಿಸ್ತೃತ ನೆಲೆಯಲ್ಲಿ ತಂತ್ರಜ್ಞಾನ ಬಳಕೆ ಮಾಡುವುದರ ಪರವಾಗಿ ಇರಲಿದೆ.
ಇದೊಂದು ಅನಿರ್ಬಂಧಿತ ಪರಿಸ್ಥಿತಿಯಾಗಿದ್ದು, ನಮಗೆ ಸಹಕರಿಸಬೇಕು. ಈ ಸಂಬಂಧ ಕಂಪ್ಯೂಟರ್ ತಂಡ ಅಥವಾ ರಿಜಿಸ್ಟ್ರಿಗೆ ದೂರು ಕೊಂಡೊಯ್ಯಬೇಡಿ.. ವ್ಯವಸ್ಥೆಯ ಹಿತಾಸಕ್ತಿಯ ದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ನಂತರ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಕೆ ಎಸ್ ಭರತ್ ಕುಮಾರ್ ಅವರು, “ಸೈಬರ್ ಭದ್ರತಾ ಕಾರಣಗಳಿಗಾಗಿ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿನ ಎಲ್ಲಾ ಕಡೆ ವಿಡಿಯೊ ಕಾನ್ಫರೆನ್ಸ್ ಸೇವೆಯನ್ನು ಸದ್ಯಕ್ಕೆ ಅಮಾನತು ಮಾಡಲಾಗಿದೆ” ಎಂದು ತಿಳಿಸಿದರು.
ವಿಡಿಯೋ ಕಾನ್ಫರೆನ್ಸ್ ಆ್ಯಪ್ ಹ್ಯಾಕ್ ಆಗಿರುವ ವಿಚಾರ ತಿಳಿಯುತ್ತಿದ್ದಂತೆ ಹೈಕೋರ್ಟ್ ಸಿಬ್ಬಂದಿ ಕೇಂದ್ರ ವಿಭಾಗ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿದ್ದು, ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ.