ಜ ೦೮:ಗದಗ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಭಾನುವಾರ ಮಧ್ಯರಾತ್ರಿ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಬ್ಯಾನರ್ ಕಟ್ಟಲು ಯತ್ನಿಸಿದ ವೇಳೆ ವಿದ್ಯುತ್ ಸ್ಪರ್ಶವಾಗಿ
ಮೃತರನ್ನು ಹಣಮಂತ ಮಜ್ಜೂರಪ್ಪ ಹರಿಜನ (21), ಮುರಳಿ ನೀಲಪ್ಪ ನಡುವಿನಮನಿ (20) ಮತ್ತು ನವೀನ್ ನೀಲಪ್ಪ ಗಾಜಿ (19) ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಮಂಜುನಾಥ ಹರಿಜನ, ದೀಪಕ್ ಹರಿಜನ, ಮತ್ತು ಪ್ರಕಾಶ ಮಾಯಗೇರಿ ಅವರನ್ನು ಲಕ್ಷ್ಮೇಶ್ವರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯುವಕರು ವಿದ್ಯುತ್ ಕಂಬಗಳಿಗೆ ಬ್ಯಾನರ್ ಕಟ್ಟುವ ವೇಳೆ ಈ ದುರಂತ ಸಂಭವಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಸ್ಥಳಕ್ಕೆ ಶಿರಹಟ್ಟಿ ಸಿಪಿಐ ನಾಗರಾಜ ಮಾಡಳ್ಳಿ ಹಾಗೂ ಇತರ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ