ಜ ೧೦:
ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಥಾನಕ್ಕೆ ಸಮಿತಿ ರಚಿಸಲಾಗುತ್ತಿದೆ. ಈ ಸಮತಿಯ ರಾಜ್ಯಾಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗುವುದು ಎಂದು ಹೇಳಿದ್ದಾರೆ.
ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲೂ ಸಮಿತಿ ರಚಿಸಲಾಗುವುದು. ರಾಜ್ಯ ಮಟ್ಟದ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನ ಮಾನ ನೀಡಲಾಗುವುದು. ಉಳಿದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವ ಧನ ನೀಡಲಾಗುವುದು. ಇದಕ್ಕೆ ವಾರ್ಷ 16 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಸಿಎಂ ತಿಳಿಸಿದ್ದಾರೆ.
ಮಹಿಳೆಯರಿಗೆ ಉಚಿತ ಬಸ್ ಸೇವೆ ಒದಗಿಸುವ ಶಕ್ತಿ ಯೋಜನೆ, ಮನೆಯ ಒಡತಿಗೆ 2000 ರೂ.ಗಳನ್ನು ನೀಡುವ ಗೃಹ ಲಕ್ಷ್ಮೀ ಯೋಜನೆ, ‘ಗೃಹಜ್ಯೋತಿ’ ಉಚಿತ ವಿದ್ಯುತ್ ಯೋಜನೆ, ಅನ್ನಭಾಗ್ಯ ಯೋಜನೆ ಹಾಗೂ ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.