Mon. Dec 23rd, 2024

ರೈಲು ಪ್ರಯಾಣಿಕರೇ ಗಮನಕ್ಕೆ:ಬೆಂಗಳೂರು ಮತ್ತು ಕಲಬುರಗಿ ರದ್ದಾಗಿದೆ ವಿಶೇಷ ರೈಲು

ರೈಲು ಪ್ರಯಾಣಿಕರೇ ಗಮನಕ್ಕೆ:ಬೆಂಗಳೂರು ಮತ್ತು ಕಲಬುರಗಿ ರದ್ದಾಗಿದೆ ವಿಶೇಷ ರೈಲು

ಮೇ 28:

 ಸೆಂಟ್ರಲ್ ರೈಲ್ವೆ ಕಾರ್ಯಾಚರಣೆಯ ನಿರ್ಬಂಧಗಳ ಕಾರಣದಿಂದ ಎಸ್‌ಎಂವಿಟಿ ಬೆಂಗಳೂರು ಮತ್ತು ಕಲಬುರಗಿ ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ರದ್ದುಗೊಳಿಸುವುದಾಗಿ ನೈಋತ್ಯ ರೈಲ್ವೆ ತಿಳಿಸಿದೆ. ಬೇಸಿಗೆ ರಜೆ ಅವಧಿಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡುವ ಉದ್ದೇಶದೊಂದಿಗೆ ಈ ವಿಶೇಷ ರೈಲು ಆರಂಭಿಸಲಾಗಿತ್ತು

ಎಸ್‌ಎಂವಿಟಿ ಬೆಂಗಳೂರಿನಿಂದ (ರೈಲು ಸಂಖ್ಯೆ 06261) ಮೇ 29 ಮತ್ತು ಜೂನ್ 27 ರ ನಡುವೆ ಮತ್ತು ಕಲಬುರಗಿಯಿಂದ (ರೈಲು ಸಂಖ್ಯೆ 06262) ಮೇ 30 ಮತ್ತು ಜೂನ್ 28 ರ ನಡುವೆ ಸಂಚರಿಸಲಿರುವ ವಿಶೇಷ ರೈಲುಗಳು ರದ್ದಾಗಿವೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಮುಂಬೈಯ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್​​​​​ನಲ್ಲಿ ಸಂಚಾರ ನಿರ್ಬಂಧ

ಮುಂಬೈಯ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್​​​​​ನಲ್ಲಿ ಪ್ಲಾಟ್​​ಫಾರ್ಮ್​​ ವಿಸ್ತರಣೆಗಾಗಿ 36 ಗಂಟೆಗಳ ಸಂಚಾರ ನಿರ್ಬಂಧದ ಕಾರಣ ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿ ಮೇ 31 ಮತ್ತು ಜೂನ್ 2 ರ ನಡುವೆ 69 ದೂರ ಸಂಚಾರದ ರೈಲುಗಳು ರದ್ದಾಗಿವೆ. 24 ಕೋಚ್ ಸಾಮರ್ಥ್ಯದ ರೈಲುಗಳಿಗೆ ಸಂಚಾರಕ್ಕೆ ಅನುವು ಮಾಡಿಕೊಡುವುದಕ್ಕೆ ಸಂಬಂಧಿಸಿದ ವಿಸ್ತರಣಾ ಕಾಮಗಾರಿ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್​​​​​ನಲ್ಲಿ ನಡೆಯುತ್ತಿದೆ. ಇದು ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿ ಇತರ ರೈಲುಗಳ ಸಂಚಾರದ ಮೇಲೂ ಪರಿಣಾಮ ಬೀರಿದೆ.

ದಕ್ಷಿಣ ರೈಲ್ವೆಯು ಸದ್ಯ ಉಪನಗರ ರೈಲುಗಳನ್ನು ಭಾಗಶಃ ರದ್ದುಗೊಳಿಸಿದೆ. ಚೆನ್ನೈ ಬೀಚ್ – ಚೆಂಗಲ್‌ಪೇಟ್ ಎಮು ಮೂಲಕ ಸಂಚರಿಸುವವರು ಚೆನ್ನೈ ಬೀಚ್‌ನಿಂದ ಹೊರಡುವುದು ಸಿಂಗಪೆರುಮಾಳ್ ಕೋಯಿಲ್‌ವರೆಗೆ ಮಾತ್ರ ಸಂಚರಿಸಬಹುದಾಗಿದೆ. ದಕ್ಷಿಣ ರೈಲ್ವೆಯು ಭಾನುವಾರ ರಾತ್ರಿ ತಿರುಚ್ಚಿಯಿಂದ ಕುಂಭಕೋಣಂ ಮತ್ತು ಮೈಲಾಡುತುರೈ ಮೂಲಕ ತಾಂಬರಂಗೆ ಮೆಮು ವಿಶೇಷ ರೈಲನ್ನು ಓಡಿಸಲಿದೆ. ಆದರೆ, ಇದರಲ್ಲಿ ಟಿಕೆಟ್ ಕಾಯ್ದಿರಿಸುವ ಸೌಲಭ್ಯ ಇರುವುದಿಲ್ಲ.

Whatsapp Group Join
facebook Group Join

Related Post

Leave a Reply

Your email address will not be published. Required fields are marked *

error: Content is protected !!
Enable Notifications OK No thanks