ಜೂನ್ ೨೨: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 17ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬರೀ ರಾಜ್ಯ, ದೇಶ ಅಲ್ಲದೆ, ವಿಶೇಶಗಳವರೆಗೂ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ರೇವಣ್ಣ ಅಣ್ಣ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪವೊಂದು ಕೇಳಿಬಂದಿದೆ.
ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 17ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬರೀ ರಾಜ್ಯ, ದೇಶ ಅಲ್ಲದೆ, ವಿಶೇಶಗಳವರೆಗೂ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ರೇವಣ್ಣ ಅಣ್ಣ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪವೊಂದು ಕೇಳಿಬಂದಿದೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನು ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಕಳಿಸಿದ್ದ ಎನ್ನಲಾಗಿದೆ. ಆ ಕಾರಣದಿಂದ ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದುಕೊಂಡು ಬಂದು ಪಟ್ಟಣಗೆರೆ ಶೆಡ್‌ನಲ್ಲಿ ಚಿತ್ರಹಿಂಸೆ ನೀಡಿ ಸಾಯಿಸಲಾಯಿತು ಎಂಬ ಆರೋಪ ದರ್ಶನ್, ಪವಿತ್ರಾ ಗೌಡ ಹಾಗೂ ಸಹಚರರ ಮೇಲಿದೆ.
ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಪವಿತ್ರಾ ಸೇರಿದಂತೆ 13 ಮಂದಿ ಜೈಲು ಸೇರಿದ್ದಾರೆ. ದರ್ಶನ ಸೇರಿದಂತೆ ನಾಲ್ವರು ಪೊಲೀಸ್ ಕಸ್ಟಡಿಯಲ್ಲಿ ವಿಚರಾಣೆ ಎದುರಿಸುತ್ತಿದ್ದಾರೆ. ಇತ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಮಾತನಾಡಿರುವ ನಟಿ ರಮ್ಯಾ ರೇಣುಕಾಸ್ವಾಮಿ ಹತ್ಯೆ ಕುರಿತಂತೆ ನಟ ದರ್ಶನ್ ಹಾಗೂ ಗ್ಯಾಂಗ್ ನಡೆದುಕೊಂಡ ರೀತಿಗೆ ಕಿಡಿಕಾರಿದ್ದಾರೆ. ಕರ್ನಾಟಕದ ಕಾನೂನಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಟ್ವಿಟ್ ಮಾಡಿದ್ದಾರೆ. ಈ ಪ್ರಕರಣವನ್ನು ಪೊಲೀಸರು ತನಿಖೆ ಕೈಗೊಂಡ ದಿನದಿಂದಲೂ ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ನ್ಯಾಯ ಸಿಗಬೇಕು ಎಂದು ಧ್ವನಿ ಎತ್ತುತ್ತಿದ್ದಾರೆ.
ರಮ್ಯಾ ಮಾಡಿರುವ ಟ್ವಿಟ್‌ನಲ್ಲಿ ಏನಿದೆ?: ಸುದ್ದಿಯಲ್ಲಿರುವ ಕಾನೂನನ್ನು ಮುರಿಯುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು ಮತ್ತು ಅವರ ಹಿಂಸಾತ್ಮಕ ಕ್ರಿಯೆಗಳ ಅಂತ್ಯದಲ್ಲಿ ಬಡವರು, ಮಹಿಳೆಯರು, ಮಕ್ಕಳು, ಕರ್ನಾಟಕದ ಜನಸಾಮಾನ್ಯರು. ಈ ಅಪರಾಧಗಳನ್ನು ಹೊರಗೆ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ . ವಿಚಾರಣೆಯನ್ನು ತ್ವರಿತಗೊಳಿಸಿದಾಗ ಮತ್ತು ಪ್ರಕರಣಗಳನ್ನು ಅವುಗಳ ತಾರ್ಕಿಕ ತೀರ್ಮಾನಕ್ಕೆ ತೆಗೆದುಕೊಂಡಾಗ ನಿಜವಾಗಿಯೂ ನ್ಯಾಯವನ್ನು ಮಾಡಲಾಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ, ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡುತ್ತೇವೆ? ಎಂದು ಟ್ವಿಟ್ ಮಾಡಿದ್ದಾರೆ.