ಜೂನ್ ೨೮:
ಜೈಲಿನಿಂದಲೇ ನಟ ದರ್ಶನ್ ಮನವಿ ಮಾಡಿದ್ದಾರೆ. ಜೈಲಾಧಿಕಾರಿಗಳ ಮೂಲಕ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ. ‘ಯಾರೂ ಜೈಲಿನ ಬಳಿ ಬರಬೇಡಿ’ ಎಂದು ಅಭಿಮಾನಿಗಳ ಬಳಿ ದರ್ಶನ್ ಮನವಿ ಮಾಡಿದ್ದಾರೆ. ಜೈಲಿನ ನಿಯಮಗಳ ಪ್ರಕಾರ ಅಭಿಮಾನಿಗಳ ಭೇಟಿ ಅಸಾಧ್ಯ. ಹೀಗಾಗಿ ಸುಮ್ಮನೆ ಬಂದು ಸಮಯ ವ್ಯರ್ಥ ಮಾಡದಂತೆ ದರ್ಶನ್ ಕೋರಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ :ದರ್ಶನ್ ಫುಲ್ ಟೈಟ್ ಆದಾಗಲೇ ಈ ಕೃತ್ಯ ಮಾಡಿರಬಹುದು-ಭಾವನಾ ಬೆಳಗೆರೆ..!
‘ಜೈಲಿನ ಬಳಿ ನನ್ನ ಭೇಟಿಗೆ ಬಂದು ನೀವು ಕಾಯುವುದು, ನನ್ನ ಭೇಟಿಗೆ ಅವಕಾಶ ಸಿಗದೆ ನಿರಾಸೆಯಿಂದ ವಾಪಸ್ ಹೋಗುವುದು ಬೇಡ’ ಎಂದು ದರ್ಶನ್ ಅವರು ಜೈಲಾಧಿಕಾರಿಗಳ ಮೂಲಕ ಅಭಿಮಾನಿಗಳಿಗೆ ಸಂದೇಶ ಕಳುಹಿಸಿದ್ದಾರೆ. ಇತ್ತೀಚೆಗೆ ಸೌಮ್ಯ ಹೆಸರಿನ ವಿಶೇಷ ಚೇತನ ಯುವತಿ ದರ್ಶನ್ ಭೇಟಿಗೆ ಬಂದಿದ್ದರು. ಜೈಲಿನ ಬಳಿ ಬಂದು ದರ್ಶನ್ ಭೇಟಿಗೆ ಹಠ ಮಾಡಿದ್ದರು. ಇದನ್ನು ಕೇಳಿ ದರ್ಶನ್ ಬೇಸರಗೊಂಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಸೂರ್ಯಕಾಂತ್ ಹೆಸರಿನ ವಿಶೇಷ ಚೇತನ ಕೂಡ ಆಗಮಿಸಿದ್ದ.ಈ ರೀತಿ ಆಗಮಿಸಿದವರಿಗೆ ದರ್ಶನ್ ಭೇಟಿ ಅಸಾಧ್ಯ. ಹೀಗಾಗಿ, ಈ ಎಲ್ಲಾ ವಿಚಾರ ತಿಳಿದು ಅಭಿಮಾನಿಗಳ ಬಳಿ ದರ್ಶನ್ ಮನವಿ ಮಾಡಿಕೊಂಡಿದ್ದಾರೆ. ಇದನ್ನು ಅಭಿಮಾನಿಗಳು ಪಾಲಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ