ಜು ೧೧: ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ನೀರು ಬಿಡುವಂತೆ ತಮಿಳುನಾಡು ವಾದಮಾಡಿದೆ. ಇದಕ್ಕೆ ಪ್ರತಿಯಾಗಿ ಕರ್ನಾಟಕವೂ ಸಹ ಕಾವೇರಿಯಲ್ಲಿ ನೀರಿನ ಕೊರತೆ ಇದೆ. ಈ ಮಾನ್ಸೂನ್ ಸಾಮಾನ್ಯವಾಗಿಲ್ಲ, 28% ಮಳೆ ಕೊರತೆಯಾಗಿದೆ. ಹೀಗಾಗಿ ನೀರು ಬಿಡಲು ಆಗುವುದಿಲ್ಲ ಎಂದು ಕರ್ನಾಟಕದ ಪರ ಅಧಿಕಾರಿಗಳು ವಾದ ಮಂಡಿಸಿದ್ದಾರೆ. ಎರಡೂ ರಾಜ್ಯಗಳ ವಾದ-ಪ್ರತಿವಾದ ಆಲಿಸಿದ CWRC, ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಶಿಫಾರಸು ಮಾಡಿದೆ
ರಾಜ್ಯದ ಪಶ್ಚಿಮಘಟ್ಟ, ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದು ನದಿಗಳಿಗೆ ಮರುಜೀವ ಕೊಟ್ಟಿದೆ. ರಾಜ್ಯದ ಬಹುತೇಕ ನದಿಗಳ ನೀರಿನ ಮಟ್ಟ ಹೆಚ್ಚಾಗಿದ್ದು, ಜಲಾಶಯಗಳ ಒಳಹರಿವು ಕೂಡ ಹೆಚ್ಚಾಗುತ್ತಿದೆ.
ಕೃಷ್ಣರಾಜ ಸಾಗರ (ಕೆಆರ್ ಎಸ್) ಜಲಾಶಯಕ್ಕೆ ಸದ್ಯ 8425 ಕ್ಯೂಸೆಕ್ಸ್ ನೀರು ಹರಿದುಬರುತ್ತಿದ್ದು, ಶುಕ್ರವಾರ ವೇಳೆಗೆ ಈ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ. ಕೆಆರ್ ಎಸ್ ನಿಂದ ಸದ್ಯ 567 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. 49.45 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 25.09 ಟಿಎಂಸಿ ನೀರು ಸಂಗ್ರಹವಾಗಿದೆ.
ಕಳೆದ ಜಲವರ್ಷದಲ್ಲಿ ಕರ್ನಾಟಕ ನೀರು ಸರಿಯಾಗಿ ಹರಿಸಿಲ್ಲ. ಪ್ರಸಕ್ತ ಜಲವರ್ಷದಲ್ಲಿ ಮನ್ಸೂನ್ ಸಾಮಾನ್ಯವಾಗಿದೆ. ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದೆ. ಹೀಗಾಗಿ ನೀರು ಬಿಡುವಂತೆ ಶಿಫಾರಸು ಮಾಡುವಂತೆ ತಮಿಳುನಾಡು ಪರ ಅಧಿಕಾರಿಗಳು CWRC ಗೆ ಮನವಿ ಮಾಡಿದ್ದಾರೆ.