ಆ 01:
ಮುಡಾ ಹಗರಣ: ಏನಾಯ್ತು?
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿದೆ ಎಂದು ದೂರು ನೀಡಿದ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೋಟಿಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ, ಸಚಿವ ಸಂಪುಟವು ಸಿದ್ದರಾಮಯ್ಯ ಅವರನ್ನು ಹೊರಗಿಟ್ಟು ಸಭೆ ನಡೆಸಿ, ರಾಜ್ಯಪಾಲರ ನೋಟಿಸ್ ಹಿಂಪಡೆಯುವಂತೆ ನಿರ್ಣಯ ಕೈಗೊಂಡಿದೆ.
ಸಚಿವ ಸಂಪುಟದಲ್ಲಿ ಏನೆಲ್ಲಾ ಚರ್ಚೆಯಾಯ್ತು?
ಮುಡಾ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡುವ ಚಿಂತನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ನೋಟಿಸ್ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದು, ಹಿಂಪಡೆಯುವಂತೆ ನಿರ್ಣಯ ಕೈಗೊಳ್ಳಲಾಗಿದೆ.
ಇದನ್ನು ಓದಿ : ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಹೆಚ್ಚಳ: ವಾಣಿಜ್ಯ ಸಿಲಿಂಡರ್ ದುಬಾರಿಯಾಗಿದರೂ, ಗೃಹ ಸಿಲಿಂಡರ್ ಬೆಲೆ ಸ್ಥಿರ
ರಾಜ್ಯಪಾಲರ ಕ್ರಮ ರಾಜಕೀಯ ಪ್ರೇರಿತ: ಸಚಿವ ಸಂಪುಟ
ಸಚಿವ ಸಂಪುಟದ ಸಭೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ದಾಖಲಾಗಿರುವ ದೂರುಗಳ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗುರುತಿಸಿ, ಮುಡಾ ಹಗರಣದಲ್ಲಿ ನೋಟಿಸ್ ನೀಡಿದಂತೆಯೇ ಈ ವಿಷಯ ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಲಾಗಿದೆ.
ಮೊಟ್ಟೆ ಹಗರಣದ ಹಿನ್ನೆಲೆ
ಮೊಟ್ಟೆ ಹಗರಣಕ್ಕೆ ಸಂಬಂಧಿಸಿದ ದೂರು ಮೊದಲು ದಾಖಲಾಗಿದ್ದು, ಮೂರು ತಿಂಗಳಾದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಭೆಯಲ್ಲಿ ಚರ್ಚೆಯಾಗಿದೆ.
ಸಚಿವ ಸಂಪುಟದ ಮಹತ್ವದ ನಿರ್ಣಯ
ಸಚಿವ ಸಂಪುಟದಲ್ಲಿ ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಒತ್ತಡ ಹೇರುತ್ತಿರುವುದು ಸರಿಯಲ್ಲ ಎಂದು ಚರ್ಚೆ ಮಾಡಲಾಗಿದ್ದು, ಸಭೆ ಬಳಿಕ ಸಚಿವ ರಾಜಣ್ಣ ಮತ್ತು ಈಶ್ವರ್ ಖಂಡ್ರೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಮುಡಾ ಹಗರಣ: ಮುಂದಿನ ತೀರ್ಮಾನಗಳು
ಮುಡಾ ಹಗರಣದ ಆರೋಪ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿದರೆ, ಸರ್ಕಾರದ ಮುಂದಿನ ಕ್ರಮವನ್ನು ಕಾದುನೋಡಬೇಕಾಗಿದೆ.