ಬೆಂಗಳೂರು ಡಿ 10:- ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ (92) ಇಂದು (ಡಿಸೆಂಬರ್ 10, 2024) ಬೆಳಿಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು. ಕಳೆದ ಕೆಲವು ತಿಂಗಳುಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ನಿಧನದ ಖಚಿತ ಮಾಹಿತಿ ಕುಟುಂಬ ಸದಸ್ಯರಿಂದ ಪ್ರಕಟವಾಗಿದೆ.
ರಾಜಕೀಯ ಜೀವನದ ಉಜ್ವಲ ಅಧ್ಯಾಯ
ಎಸ್.ಎಂ. ಕೃಷ್ಣ ಅವರ ರಾಜಕೀಯ ವೃತ್ತಿ 50 ವರ್ಷಗಳಿಗೂ ಅಧಿಕ ಕಾಲ ಇತ್ತು. 1962ರಲ್ಲಿ ರಾಜ್ಯ ವಿಧಾನಸಭೆಗೆ ಮೊದಲ ಬಾರಿ ಆಯ್ಕೆಯಾಗಿದ ಅವರು, ನಂತರ ವಿಧಾನಸಭೆಯ ಸ್ಪೀಕರ್, ಕರ್ನಾಟಕದ ಮುಖ್ಯಮಂತ್ರಿ, ಮಹಾರಾಷ್ಟ್ರದ ರಾಜ್ಯಪಾಲ ಮತ್ತು ಕೇಂದ್ರ ವಿದೇಶಾಂಗ ಸಚಿವರಾಗಿ ಹಲವಾರು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ. 1999ರಿಂದ 2004ರವರೆಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಅವರು ಕರ್ನಾಟಕದ ಐಟಿ ಮತ್ತು ಬಿಟಿ ಕ್ಷೇತ್ರದಲ್ಲಿ ಅಪಾರ ಬೆಳವಣಿಗೆ ಮಾಡಲು ಬುನಾದಿ ಹಾಕಿದರು.