ಯಾದಗಿರಿ : ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯ ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಏವೂರು
ಏವೂರು ಗ್ರಾಮದ ನಿವಾಸಿ ಬಂದೇನವಾಜ್ (40) ಕೊಲೆಯಾದ ವ್ಯಕ್ತಿ, ಬಂದೇನವಾಜ್ ಸೋಮವಾರ ಮುಂಜಾನೆ ಬಹಿರ್ದೆಸೆಗೆಂದು ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳು ಹಿಂದಿನಿಂದ ಬಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ವರದಿಮಾಡಲಾಗಿದೆ . ಯುಗಾದಿ ಅಮಾವಾಸ್ಯೆ ದಿನವೇ ಬರ್ಬರ ಹತ್ಯೆ ಕಂಡು ಏವೂರು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಬಹಿರ್ದೆಸೆಗೆಂದು ಹೋದ ಬಂದೇನವಾಜ್ ಮನೆಗೆ ವಾಪಸ್ ಆಗಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದಾಗ, ಕೊಲೆಯಾಗಿ ಬಿದ್ದಿರುವುದು ಕಂಡು ಬಂದಿದೆ.
ಕೊಲೆಗೆ ನಿಖರ ಕಾರಣ ಏನು? ಹಂತಕರು ಯಾರು ಎಂಬುದು ತಿಳಿದು ಬಂದಿಲ್ಲ. ಸ್ಥಳೀಯಯರ ಮಾಹಿತಿ ಪಡೆದು ಎಸ್‌ಪಿ ಜಿ.ಸಂಗೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಕೆಂಭಾವಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಕೊಲೆಗಾರರಿಗಾಗಿ ಹುಡುಕಾಟವನ್ನು ಪೊಲೀಸರು ನಡೆಸಿದ್ದಾರೆ.