ರಾಯಚೂರು: ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಸಿಟ್ಟಾದ ಪೂಜಾರಿ, ಮುಸ್ಲಿಂ
ಖಾದರ್ ಭಾಷಾ (28) ಕೊಲೆಯಾದವನು. ಮಾರುತಿ ಕೊಲೆ ಆರೋಪಿ. ಕೊಲೆಗೈದು ಪೊಲೀಸರಿಗೆ ಶರಣಾಗಿದ್ದಾನೆ. ಆಂಜನೇಯ ಗುಡಿ ಪೂಜಾರಿಯ ಪತ್ನಿಗೆ ಮುಸ್ಲಿಂ ಯುವಕ ಮೆಸೇಜ್ ಮಾಡಿದ್ದಕ್ಕೆ ಹತ್ಯೆ ನಡೆದಿದೆ ಎನ್ನಲಾಗಿದೆ.
ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಮಾರುತಿ ಅರ್ಚಕ ಆಗಿದ್ದನು. ಇವನ ಪತ್ನಿಯ ಮೇಲೆ ಖಾದರ್ ಭಾಷಾ ಕಣ್ಣು ಹಾಕಿದ್ದ ಎನ್ನುವ ಅನುಮಾನ ಮಾರುತಿಗೆ ಇತ್ತು. ಖಾದರ್ ಭಾಷಾ ಪತ್ನಿಗೆ ಮೇಸೆಜ್ ಮಾಡಿದ್ದಾನೆ ಎಂದು ಕೋಪಗೊಂಡ ಮಾರುತಿ ಖಾದರ್ ಭಾಷಾನ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆ ಮಾಡಲಾಗಿದೆ. ಮಾರುತಿ ಕೊಲೆಗೈದು ತಾನೇ ಖುದ್ದಾಗಿ ಠಾಣೆಗೆ ಬಂದು ಶರಣಾಗತಿ ಆಗಿದ್ದಾನೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಮಂಗಳವಾರ ಬೆಳಗ್ಗೆ 9 ಗಂಟೆಗೆ ಸುಮಾರಿಗೆ ತುಗ್ಗಲದಿನ್ನಿ ಗ್ರಾಮದಲ್ಲಿ ಕೃತ್ಯ ನಡೆದಿದೆ. ಕೊಲೆಯಲ್ಲಿ 6 ರಿಂದ 7 ಜನ ಭಾಗಿಯಾಗಿರುವ ಶಂಕೆ ಇದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ತಸಿಕ್ತವಾಗಿ ಬಿದ್ದಿದ್ದ ಖಾದರ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.