Mon. Dec 23rd, 2024

‘ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಆಗಲಿ’; ಉಪೇಂದ್ರ ಟ್ವೀಟ್

‘ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಆಗಲಿ’; ಉಪೇಂದ್ರ ಟ್ವೀಟ್

ಜೂನ್ ೧೭:ರೇಣುಕಾ ಸ್ವಾಮಿ  ಕೊಲೆ ಕೇಸ್​ನಲ್ಲಿ ಅನೇಕ ಸೆಲೆಬ್ರಿಟಿಗಳು ಮೌನ ಮುರಿದಿದ್ದಾರೆ. ಅನೇಕ ಸೆಲೆಬ್ರಿಟಿಗಳು ಈ ವಿಚಾರದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಕೆಲವರು ದರ್ಶನ್ ಪರ ನಿಂತರೆ ಇನ್ನೂ ಕೆಲವರು ದರ್ಶನ್ ಅವರನ್ನು ವಿರೋಧಿಸಿದ್ದಾರೆ. ಇನ್ನೂ ಕೆಲವರು ಸಮತೋಲನವಾಗಿ ಮಾತನಾಡಿದ್ದಾರೆ. ದರ್ಶನ್ ಬಂಧನ ನಡೆದ ವಾರದ ಬಳಿಕ ಈ ಘಟನೆ ಬಗ್ಗೆ ಉಪೇಂದ್ರ

 ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ, ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್​ನ ವಿಚಾರಣೆಯಲ್ಲಿ ನಿಷ್ಪಕ್ಷವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ’ ಎಂದು ಪೋಸ್ಟ್ ಆರಂಭಿಸಿದ್ದಾರೆ ದರ್ಶನ್.

‘ಯಾವುದೇ ಕೇಸ್ ಆದರೂ ಆ ಕೇಸ್​ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂಧಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. (ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು )( ಕಾನೂನು ಸುಧಾರಣೆಗಳು ಎಂದು ಸಲಹೆ ನೀಡಿದ್ದಾರೆ.

‘ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್​ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು  ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು. ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ’ ಉಪೇಂದ್ರ ಟ್ವೀಟ್ .

‘ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟಿವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆೇ ಪೋಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ’ ಅನ್ನೋದು ಉಪೇಂದ್ರ ಮಾತು.

Whatsapp Group Join
facebook Group Join

Related Post

Leave a Reply

Your email address will not be published. Required fields are marked *

error: Content is protected !!
Enable Notifications OK No thanks