Mon. Dec 23rd, 2024

LKG/UKG-Govt School:ಅಂಗನವಾಡಿ ನೌಕರರ ಧರಣಿ; ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದ ಲಕ್ಷ್ಮಿ ಹೆಬ್ಬಾಳ್ಕರ್‌

LKG/UKG-Govt School:ಅಂಗನವಾಡಿ ನೌಕರರ ಧರಣಿ; ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದ ಲಕ್ಷ್ಮಿ ಹೆಬ್ಬಾಳ್ಕರ್‌

ಜೂನ್.24: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭ ವಿರೋಧಿಸಿ, ಗೌರವ ಧನ ಹೆಚ್ಚಳ ಹಾಗೂ ಗುಣಮಟ್ಟದ ಆಹಾರ ಪೂರೈಕೆ ಸೇರಿ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ನಿಂದ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಲಾಗುತ್ತಿದೆ. ಹೀಗಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ‌ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಅಂಗನವಾಡಿ ನೌಕರರ ಬೇಡಿಕೆಗಳ ಬಗ್ಗೆ ಸಿಎಂಗೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಈ ವೇಳೆ ಬೇಡಿಕೆಗಳ ಪೈಕಿ ಕೆಲವೊಂದನ್ನು ಪರಿಶೀಲಿಸಿ ಪರಿಗಣಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಕೇಂದ್ರ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಇತ್ತೀಚೆಗೆ ಅನುಮೋದನೆ ನೀಡಿತ್ತು. ಆದರೆ, ಸರ್ಕಾರದ ಈ ನಿರ್ಧಾರದ ಹಿಂದೆ, ಅಂಗನವಾಡಿಗಳನ್ನು ಮುಚ್ಚುವ ಹುನ್ನಾರವಿದೆ. ಎಲ್‌ಕೆಜಿ, ಯುಕೆಜಿ ಆರಂಭಿಸಿದರೆ ಅಂಗನವಾಡಿಗಳಲ್ಲೇ ಆರಂಭಿಸಬೇಕು. ಇಲ್ಲದಿದ್ದರೆ ಈ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂಬುವುದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಒತ್ತಾಯವಾಗಿದೆ.

ತಜ್ಞರ ಕಮಿಟಿ ರಚನೆ ಮಾಡಲು ಚರ್ಚೆ: ಲಕ್ಷ್ಮಿ ಹೆಬ್ಬಾಳ್ಕರ್‌

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಎಲ್‌ಕೆಜಿ, ಯುಕೆಜಿ ಪ್ರಾರಂಭಕ್ಕೆ ಸರ್ಕಾರದಿಂದ ಚಿಂತನೆ ಮಾಡಲಾಗಿದೆ. ಆದರೆ, ಈ ನಿರ್ಧಾರ ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದಾರೆ. ಗುಣಮಟ್ಟದ ಶಿಕ್ಷಣ ನೀಡುವ ಕಳಕಳಿ ಶಿಕ್ಷಣ ಇಲಾಖೆಗೆ ಇದೆ. ಆದರೆ ಅಂಗನವಾಡಿಯವರು ವಿರುದ್ಧವಿದ್ದಾರೆ ಎಂದು ತಿಳಿಸಿದರು.

40 ವರ್ಷಗಳಿಂದ ನಾವು ಕೆಲಸ ಮಾಡುತ್ತಿದ್ದೇವೆ. ಮಕ್ಕಳಿಗೆ ಕಲಿಸುವ ಕೆಲಸವೂ ಆಗುತ್ತಿದೆ. ಹಾಗಾಗಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಬೇಡ ಎಂಬುವುದು ಅವರ ವಾದ. ಈ ನಿಟ್ಟಿನಲ್ಲಿ ತಜ್ಞರ ಕಮಿಟಿ ರಚನೆ ಮಾಡುವ ಚರ್ಚೆಯಾಗಿದೆ, ಅಂಗನವಾಡಿಗಳನ್ನು ಮೇಲ್ದೆರ್ಜೇಗೇರಿಸುವ ಬಗ್ಗೆ ಸಿಎಂ ಹೇಳಿದ್ದಾರೆ. ಕನ್ನಡ, ಇಂಗ್ಲಿಷ್ ಎರಡನ್ನೂ ಕಲಿಸುವ ಚಿಂತನೆ ಇದೆ. ಸರ್ಕಾರಿ ಮಾಂಟೆಸ್ಸರಿ ಮಾದರಿಯಲ್ಲಿ ಮಾಡುತ್ತೇವೆ. 9000 ಪದವಿ ಪಡೆದ ಶಿಕ್ಷಕಿಯರು ಇದ್ದಾರೆ. ಸ್ನಾತಕ್ಕೋತ್ತರ ಪದವಿ ಪಡೆದವರು ಇದ್ದಾರೆ. ಹೀಗಾಗಿ ಸಿಎಂ ಫೈನಾನ್ಸ್‌ ಡಿಪಾರ್ಟ್‌ಮೆಂಟ್ ಅಪ್ರೂವಲ್ ಪಡೆದು ಮಾಡೋಣ ಎಂದಿದ್ದಾರೆ. ಪ್ರಸ್ತುತ 2600 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಮಾಡೋಕೆ ಸುತ್ತೋಲೆ ಹೊರಡಿಸಿದ್ದಾರೆ. ಇದರ ಬಗ್ಗೆ ಅಂಗನವಾಡಿ ಕಾರ್ಯಕರ್ತರ ಜತೆ ಚರ್ಚಿಸಿದ್ದೇವೆ. ಯಾರನ್ನೂ ಕೆಲಸದಿಂದ ತೆಗೆಯೋದಿಲ್ಲ ಎಂದು ಹೇಳಿದರು.

Whatsapp Group Join
facebook Group Join

Related Post

Leave a Reply

Your email address will not be published. Required fields are marked *

error: Content is protected !!
Enable Notifications OK No thanks