ಆ ೨೫: ರಾಜ್ಯದ ಮಾರುಕಟ್ಟೆಗಳಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಬೆಳೆಗಳ ಬೆಲೆ ಕುಸಿತದ ಹಿನ್ನೆಲೆ, ಕೇಂದ್ರ ಸರ್ಕಾರವು ರೈತರಿಗೆ ಬೆಂಬಲ ನೀಡುವ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಬೆಲೆ ಬೆಂಬಲ ಯೋಜನೆ (MSP
ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಮ್ಮ ಟ್ವೀಟ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ತಕ್ಷಣ ಪರಿಹಾರ ಒದಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಕೇಂದ್ರ ಸರ್ಕಾರವು 2215 ಮೆಟ್ರಿಕ್ ಟನ್ ಹೆಸರುಕಾಳನ್ನು ಪ್ರತಿ ಕ್ವಿಂಟಾಲ್ ₹8682 ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮತಿ ನೀಡಿದ್ದು, ಇದರಿಂದ ಹೆಸರುಕಾಳು ಬೆಳೆಗಾರರಿಗೆ ತಕ್ಷಣ ಸಹಾಯವಾಗಲಿದೆ. ಇದೇ ರೀತಿಯಾಗಿ, 13,210 ಮೆಟ್ರಿಕ್ ಟನ್ ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿಸಲು ಕೇಂದ್ರ ಸರ್ಕಾರವು ಅನುಮತಿ ನೀಡಿದೆ.
ರಾಜ್ಯದ ಮಾರುಕಟ್ಟೆಗಳಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಬೆಳೆಗಳಿಗೆ ಸರಿಯಾದ ಮೌಲ್ಯ ದೊರೆಯದ ಕಾರಣ, ರಾಜ್ಯದ ರೈತರು ಸಂಕಷ್ಟದಲ್ಲಿದ್ದರು. ಈ ಹಿನ್ನೆಲೆ, ರಾಜ್ಯ ಸರ್ಕಾರವು 2024ರ ಆಗಸ್ಟ್ 21ರಂದು ಕೇಂದ್ರಕ್ಕೆ ಪತ್ರ ಬರೆದು, ಬೆಲೆ ಬೆಂಬಲ ಯೋಜನೆ ಅಡಿ ಖರೀದಿಗೆ ವಿನಂತಿಸಿತ್ತು. ಈ ಮನವಿಗೆ ತಕ್ಷಣ ಸ್ಪಂದಿಸಿದ ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ ಅವರು, ರೈತರ ಬೆಳೆಗಳಿಗೆ ತಕ್ಷಣ ಬೆಂಬಲ ಬೆಲೆ ನಿಗದಿ ಮಾಡುವಂತೆ ನಿರ್ದೇಶನ ನೀಡಿದರು.
ಕೇಂದ್ರ ಸರ್ಕಾರದ ಈ ತುರ್ತು ಕ್ರಮದಿಂದ, ರಾಜ್ಯದ ರೈತರು ತಮ್ಮ ಬೆಳೆಗಳಿಗೆ ಸಮರ್ಪಕ ಮೌಲ್ಯವನ್ನು ಪಡೆಯಲು ಸಹಾಯವಾಗಲಿದೆ.
ರಾಜ್ಯ ಸರ್ಕಾರವು ಕೂಡಲೇ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿ, ಬೆಲೆ ಬೆಂಬಲ ಯೋಜನೆ ಅಡಿ ಹೆಸರುಕಾಳು ಮತ್ತು ಸೂರ್ಯಕಾಂತಿ ಬೆಳೆಗಳನ್ನು ಖರೀದಿಸಲು ತಯಾರಿ ನಡೆಸುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ರೈತರ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ಕೈಗೊಂಡಿದ್ದು, ತೀವ್ರ ಶ್ರಮ ಪಟ್ಟು ಬೆಳೆದ ಬೆಳೆಗೆ ನ್ಯಾಯಯುತ ಮೌಲ್ಯವನ್ನು ದೊರೆಯಲು ಈ ಯೋಜನೆ ಬೆನ್ನುಬಲವಾಗಿ ಕಾರ್ಯನಿರ್ವಹಿಸುತ್ತದೆ.
ಈ ಬೆಂಬಲ ದರ ಯೋಜನೆ ಕೇವಲ ಅಲ್ಪಾವಧಿಯ ಸಮಸ್ಯೆಗೆ ಪರಿಹಾರ ನೀಡುವುದಲ್ಲ, ಮುಂಬರುವ ಬೆಳೆಗಾರಿಕೆ ಕಾರ್ಯಕ್ರಮಗಳಿಗೂ ಪ್ರೇರಣೆ ನೀಡುವ ಸಾಮರ್ಥ್ಯವನ್ನು ಹೊಂದಿದೆ.
ರಾಜ್ಯದ ರೈತರು ತಮ್ಮ ಬೆಳೆಗಳಿಗೆ ನ್ಯಾಯಯುತ ಮೌಲ್ಯವನ್ನು ಪಡೆಯಲು ಈ ಬೆಂಬಲ ದರ ಯೋಜನೆಯು ಪ್ರಮುಖ ಪಾತ್ರ ವಹಿಸಲಿದ್ದು, ಈ ನಿರ್ಣಯವು ರೈತರಿಗೆ ಮಹತ್ವದ ನೆರವನ್ನು ಒದಗಿಸುತ್ತದೆ.