Mon. Dec 23rd, 2024

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಡಕಾಯಿತಿ ಗ್ಯಾಂಗ್‌ ಸದಸ್ಯನ ಕಾಲಿಗೆ ಗುಂಡು

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಡಕಾಯಿತಿ ಗ್ಯಾಂಗ್‌ ಸದಸ್ಯನ ಕಾಲಿಗೆ ಗುಂಡು

ಹುಬ್ಬಳ್ಳಿ ಆ ೦೭:- ಡಕಾಯಿತಿ ಗ್ಯಾಂಗ್​ ಸದಸ್ಯನ ಮೇಲೆ ಗೋಕುಲ ರೋಡ್ ಪೊಲೀಸರು (Gokul Road Police

) ಗುಂಡು ಹಾರಿಸಿ ಬಂಧಿಸಿದ್ದಾರೆ. ಮಹೇಶ್ ಸೀತಾರಾಮ್ ಕಾಳೆ ಬಂಧಿತ ಆರೋಪಿ. ಈತನ ಗ್ಯಾಂಗ್‌ ಸೋಮವಾರ ನಸುಕಿನ ಜಾವ ಮನೆ ಕಳ್ಳತನಕ್ಕೆ ಇಳಿದಿದ್ದ ವೇಳೆ, ವಿಚಾರ ತಿಳಿದು ಕಾರ್ಯಾಚರಣೆಗೆ ಇಳಿದ ಪೊಲೀಸರು ಮಹೇಶ್‌ನ್ನು ಬಂಧಿಸುವಲ್ಲಿ ಯಶಸ್ವಿಯಾದರು.

ಮಹೇಶ್ ಮತ್ತು ಈತನ ಗ್ಯಾಂಗ್‌ ಹುಬ್ಬಳ್ಳಿಯ ವಿವಿಧ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದಾಗ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರ ಬಲೆಗೆ ಸಿಕ್ಕಿದ್ದ ಮಹೇಶ್‌ ಪರಾರಿಯಾಗಿದ್ದ ತನ್ನ ಗ್ಯಾಂಗ್‌ನವರಿರುವ ಸ್ಥಳವನ್ನು ತೋರಿಸುತ್ತೇನೆ ಎಂದು ಹೇಳಿ ಪೊಲೀಸರನ್ನು ಕರೆದುಕೊಂಡು ಹೋಗಿದ.

ಆದರೆ, ಎಚ್ಚರಿಕೆಯಿಂದ ಸ್ಥಳಕ್ಕೆ ಹೋದ ನಂತರ, ಆಕಸ್ಮಿಕವಾಗಿ ಮಹೇಶ್ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾನೆ. ಸನ್ನಿವೇಶ ತೀವ್ರ ತಿರುವು ಪಡೆದುಕೊಂಡಿದ್ದು, ಪ್ರಾಣರಕ್ಷಣೆಗಾಗಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್‌ಐ ಸಚಿನ್ ದಾಸರೆಡ್ಡಿ ಈತನ ಕಾಲಿಗೆ ಗುಂಡು ಹಾರಿಸಿದ್ದಾರೆ.

ಗುಂಡಿನಿಂದ ಗಾಯಗೊಂಡು ನೋವಿನಿಂದ ಒದ್ದಾಡುತ್ತಿದ್ದ ಮಹೇಶ್‌ನನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಲ್ಲಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್‌ಐ ಸಚಿನ್ ದಾಸರೆಡ್ಡಿ ಮತ್ತು ಪೇದೆ ವಸಂತ ಗುಡಿಗೇರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಗೋಕುಲ ರೋಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕರಣದ ಬಗ್ಗೆ ತನಿಖೆ ಮುಂದುವರಿಸುತ್ತಿದ್ದಾರೆ, ಮತ್ತು ಉಳಿದಿರುವ ಡಕಾಯಿತರನ್ನು ಬಂಧಿಸುವ ಕಾರ್ಯ ತೀವ್ರಗೊಳಿಸಲಾಗಿದೆ.

Whatsapp Group Join
facebook Group Join

Related Post

Leave a Reply

Your email address will not be published. Required fields are marked *

error: Content is protected !!
Enable Notifications OK No thanks