Mon. Dec 23rd, 2024

SSLC, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

SSLC, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

 

ಡಿ ೦೧: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ

ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ.

ಇಂದು ಪರೀಕ್ಷಾ ಮಂಡಳಿಯ ವೆಬ್ ಸೈಟ್ ನಲ್ಲಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 1 ರಿಂದ ಡಿಸೆಂಬರ್ 15ರ ವರೆಗೆ ಕಾಲಾವಕಾಶ ನೀಡಲಾಗಿದೆ.

ತಾತ್ಕಾಲಿಕ ವೇಳಾಪಟ್ಟಿ ಪ್ರಕಟ ಪ್ರಕಾರ, ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ಎಸ್ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 2, 2024ರಿಂದ ಮಾರ್ಚ್ 22, 2024ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ.

ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 25 ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎಸ್‌ಸಿಇಆರ್ ಟಿ), ಸಂಸ್ಕೃತ, 
ಮಾರ್ಚ್ 27 ರಂದು ಸಮಾಜ ವಿಜ್ಞಾನ
ಮಾರ್ಚ್ 30 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ/ಕರ್ನಾಟಕ ಸಂಗೀತ
ಎಪ್ರಿಲ್ 2 ರಂದು ಗಣಿತ, ಸಮಾಜ ಶಾಸ್ತ್ರ
ಎಪ್ರಿಲ್ 3 ರಂದು ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ – IV, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್- IV, ಇಂಜಿನಿಯರಿಂಗ್ ಗ್ರಾಫಿಕ್ಸ್ – 2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ – IV ಪರೀಕ್ಷೆಗಳು ನಡೆಯಲಿವೆ.
ಏಪ್ರಿಲ್ 4ರಂದು ತೃತೀಯ ಭಾಷೆ ಹಿಂದಿ(NCERT), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ಕ್ಯೂಎಫ್ ವಿಷಯಗಳಾದ (ಮಾಹಿತಿ ತಂತ್ರಜ್ಞಾನ, ರಿಟೇಲ್, ಅಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್‌ ವೆಲ್‌ನೆಸ್, ಅಪರೆಲ್ಸ್ ಮೇಡ್ ಆಪ್ಸ್ & ಹೋಮ್ ಫರ್ನಿಶಿಂಗ್ ಎಲೆಕ್ಟ್ರಾನಿಕ್ಸ್ & ಹಾರ್ಡ್ ವೇರ್) ಪರೀಕ್ಷೆಗಳು ನಡೆಯಲಿವೆ.
ಏಪ್ರಿಲ್ 6ಕ್ಕೆ ದ್ವಿತೀಯ ಭಾಷೆ(ಇಂಗ್ಲಿಷ್, ಕನ್ನಡ) ಪರೀಕ್ಷೆಗಳು ನಡೆಯಲಿವೆ.

ದ್ವಿತೀಯ ಪಿಯುಸಿ ವೇಳಾ ಪಟ್ಟಿ 
ಮಾರ್ಚ್ 2 ರಂದು ಕನ್ನಡ, ಅರೇಬಿಕ್
ಮಾರ್ಚ್ 4 ರಂದು ಇತಿಹಾಸ, ಭೌತಶಾಸ್ತ್ರ
ಮಾರ್ಚ್ 5 ರಂದು ಮಾಹಿತಿ ತಂತ್ರಜ್ಞಾನ, ರಿಟೈಲ್, ಅಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಅಂಡ್‌ ವೆಲ್ನೆಸ್, ಮಾರ್ಚ್ 6 ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಮಾರ್ಚ್ 7 ರಂದು ಹಿಂದಿ
ಮಾರ್ಚ್ 9 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 11 ರಂದು ಇಂಗ್ಲೀಷ್
ಮಾರ್ಚ್ 12 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 13 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ (Business Studies)
ಮಾರ್ಚ್ 14ಕ್ಕೆ ಗಣಿತ, ಶಿಕ್ಷಣ ಶಾಸ್ತ್ರ ಪರೀಕ್ಷೆ
ಮಾರ್ಚ್ 16 ರಂದು ಭೌಗೋಳ ಶಾಸ್ತ್ರ, ಜೀವ ಶಾಸ್ತ್ರ
ಮಾರ್ಚ್ 18 ರಂದು ಹಿಂದೂಸ್ತಾನಿ ಸಂಗೀತ, ಸೈಕಾಲಜಿ, ಕೆಮಿಸ್ಟ್ರಿ, ಮೂಲ ಗಣಿತ
ಮಾರ್ಚ್ 20 ಐಚ್ಛಿಕ ಕನ್ನಡ, ಅಕೌಂಟನ್ಸಿ, ಭೂವಿಜ್ಞಾನ (Geology), ಗೃಹ ವಿಜ್ಞಾನ
ಮಾರ್ಚ್ 22ಕ್ಕೆ ಅರ್ಥಶಾಸ್ತ್ರ ಪರೀಕ್ಷೆ ನಡೆಯಲಿದೆ

Whatsapp Group Join
facebook Group Join

Related Post

Leave a Reply

Your email address will not be published. Required fields are marked *

error: Content is protected !!
Enable Notifications OK No thanks